ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2017-05-14 22:40 IST
ಬಂಟ್ವಾಳ, ಮೇ 14: ಲಾರಿ ಹಾಗೂ ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಸೂರಿಕುಮೇರು ಎಂಬಲ್ಲಿ ನಡೆದಿದೆ.
ಬೈಕ್ ನಲ್ಲಿ ತೆರಳುತ್ತಿದ್ದ ವಿಟ್ಲ ಕಸಬಾ ಗ್ರಾಮದ ನೆಲ್ಲಿಗುಡ್ಡೆ ಪಲೇರಿ ನಿವಾಸಿ ಸುಖೇಶ್ ಲಾರಿಯಡಿಗೆ ಬಿದ್ದಿದ್ದು, ಪರಿಣಾಮ ಮೃತಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.