ಬೈಕ್ ಢಿಕ್ಕಿ: ವೃದ್ಧೆ ಮೃತ್ಯು
Update: 2017-05-14 22:47 IST
ಸಾಗರ, ಮೇ 14 : ತಾಲೂಕಿನ ಆನಂದಪುರಂನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬೈಕ್ ಢಿಕ್ಕಿ ಹೊಡೆದು ವೃದ್ಧೆಯಬ್ಬರು ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.
ಆನಂದಪುರಂನ ಧೃವ ವೈನ್ಸ್ ಎದುರು ನಡೆದುಕೊಂಡು ಹೋಗುತ್ತಿದ್ದ ಮಲಂದೂರು ಗ್ರಾಮದ ವಾಸಿ ಲಕ್ಷ್ಮಮ್ಮ (70) ಎಂಬವರಿಗೆ ಹಿಂಭಾಗದಿಂದ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಮ್ಮ ಅವರನ್ನು ಸಾಗರ ಆಸ್ಪತ್ರೆಗೆ ಕರೆ ತರುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.