ರೈಲು ಢಿಕ್ಕಿ: ಮಹಿಳೆ ಮೃತ್ಯು
Update: 2017-05-14 23:03 IST
ಕುಂದಾಪುರ, ಮೇ 14: ರೈಲು ಢಿಕ್ಕಿ ಹೊಡೆದ ಪರಿಣಾಮ ಹಳಿ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕನ್ಯಾನ ಗ್ರಾಮದ ಬಿಡ್ನಾಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಬಿಡ್ನಾಡಿ ನಿವಾಸಿ ನಾಗಮ್ಮ ಶೆಡ್ತಿ(65) ಎಂದು ಗುರುತಿಸಲಾಗಿದೆ. ಇವರು ಮನೆಯ ಹತ್ತಿರ ಮೇಯಲು ಕಟ್ಟಿದ ದನವನ್ನು ಕರೆದುಕೊಂಡು ರೈಲ್ವೆ ಹಳಿಯನ್ನು ದಾಟುತ್ತಿದ್ದಾಗ ರೈಲು ಢಿಕ್ಕಿ ಹೊಡೆದಿದ್ದು, ಗಂಭೀರ ವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾ ಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.