×
Ad

‘ಟಿಎಸ್ಸಾರ್ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ, ಪರಿಸರ ತಜ್ಞ ನಾಗೇಶ್ ಹೆಗಡೆ ಆಯ್ಕೆ

Update: 2017-05-15 19:03 IST

ಬೆಂಗಳೂರು, ಮೇ 15: 2016ನೆ ಸಾಲಿನ ಪ್ರತಿಷ್ಠಿತ "ಟಿಎಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ"ಗೆ ಹಿರಿಯ ಪತ್ರಕರ್ತ, ಪರಿಸರ ತಜ್ಞ ನಾಗೇಶ್ ಹೆಗಡೆಯವರನ್ನು ಆಯ್ಕೆ ಮಾಡಲಾಗಿದೆ. "ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ"ಗೆ ಕಾರವಾರದ "ಕರಾವಳಿ ಮುಂಜಾವು" ಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ ಆಯ್ಕೆಯಾಗಿದ್ದಾರೆ.

ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಇಂದ್ರಕಲಾ ಅಧ್ಯಕ್ಷತೆಯಲ್ಲಿ ಸಮಿತಿ ಮೇಲ್ಕಂಡ ಎರಡು ಪ್ರಶಸ್ತಿಗಳಿಗೆ ಅರ್ಹರನ್ನು ಶಿಫಾರಸ್ಸು ಮಾಡಿದ್ದು, ರಾಜ್ಯ ಸರಕಾರ ಅನುಮೋದಿಸಿ ಆದೇಶ ಹೊರಡಿಸಿದೆ. ಮೇಲ್ಕಂಡ ಎರಡು ಪ್ರಶಸ್ತಿಗಳು ತಲಾ 1 ಲಕ್ಷ ರೂ., ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News