ಸಾಲ ಬಾದೆ: ವಿಷ ಸೇವಿಸಿ ರೈತ ಆತ್ಮಹತ್ಯೆ
Update: 2017-05-16 18:52 IST
ಕಡೂರು, ಮೇ 16: ಸಾಲದ ಬಾದೆ ತಾಳಲಾರದೆ ರೈತರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಕಡೂರು ತಾಲೂಕಿನ ಲಿಂಗ್ಲಾಪುರ ಎಂಬಲ್ಲಿನ ಮಲ್ಲಿಕಾರ್ಜುನ (43) ಮೃತ ರೈತ ಎಂದು ಗುರುತಿಸಲಾಗಿದೆ. ಜಮೀನು ಅಭಿವೃದ್ಧಿ ಹಿನ್ನೆಲೆಯಲ್ಲಿ ವಿವಿಧ ಕಡೆಗಳಿಂದ ಸಾಲ ಮಾಡಿಕೊಂಡಿದ್ದು, ಮರುಪಾವತಿಸಲು ಸಾಧ್ಯವಾಗದೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ಕಡೂರು ಪೊಲೀಸ್ ಠಾಣೆಗೆ ದಾಖಲಾದ ದೂರಿನಲ್ಲಿ ತಿಳಿಸಲಾಗಿದೆ.