ವಿಷ ಸೇವಿಸಿ ವ್ಯಕ್ತಿ ಸಾವು
Update: 2017-05-16 22:52 IST
ರಿಪ್ಪನ್‌ಪೇಟೆ, ಮೇ 16: ಇಲ್ಲಿಗೆ ಸಮೀಪದ ಮಲ್ಲಾಪುರದ ನಿವಾಸಿ ಎಂ. ಈಶ್ವರಯ್ಯ (70)ಎಂಬವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಕಳೆದ 35 ವರ್ಷಗಳ ಕಾಲ ಕೆಲಸ ನಿರ್ವಹಿಸಿ ನಿವೃತ್ತರಾಗಿ ನಂತರ ಬ್ಯಾಂಕಿನ ಉಪಾಧ್ಯಕ್ಷರಾಗಿದ್ದು, ಇವರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿ ನೀರು ಬಾರದೆ ಬೇಸರಗೊಂಡು ಇಂದು ಮಧ್ಯಾಹ್ನ ಕ್ರಿಮಿನಾಶಕವನ್ನು ಸೇವಿಸಿದ್ದರು ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.