ಕಳಪೆ ಫಲಿತಾಂಶಕ್ಕೆ ಮೂಲ ಕಾರಣ ಹುಡುಕಿ

Update: 2017-05-16 18:43 GMT

ಮಾನ್ಯರೆ,

2017ನೆ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಈ ಬಾರಿಯೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅತೀ ಹೆಚ್ಚಿನ ಸಾಧನೆ ಮಾಡಿರುವುದು ನಾಡಿಗೆ ಹೆಮ್ಮೆಯ ವಿಷಯವಾಗಿದೆ. ಆದರೆ ಬೇಸರದ ಸಂಗತಿ ಎಂದರೆ ಪ್ರತೀ ವರ್ಷವೂ ಉತ್ತರ ಕರ್ನಾಟಕ ಭಾಗದ ಕೊಪ್ಪಳ, ಧಾರವಾಡ, ಬಳ್ಳಾರಿ, ಹಾವೇರಿ, ಗದಗ, ರಾಯಚೂರು, ಕಲಬುರಗಿ, ಬೆಳಗಾವಿ, ವಿಜಯಪುರ ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ ಫಲಿತಾಂಶ ಮಾತ್ರ ನಿರೀಕ್ಷಿತ ಮಟ್ಟದಲ್ಲಿರದೆ ಕೆಳಗಿನ ಸ್ಥಾನಗಳನ್ನು ಪಡೆದುಕೊಳ್ಳುತ್ತಿವೆ. ಇದಕ್ಕೆ ಮೂಲ ಕಾರಣ ಈ ಭಾಗದ ಜಿಲ್ಲೆಗಳಲ್ಲಿನ ಸರಕಾರಿ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ಮೂಲಭೂತ ಸೌಕರ್ಯಗಳ ಕೊರತೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಬಡ ವಿದ್ಯಾರ್ಥಿಗಳೇ ಇರುವುದರಿಂದ ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲಿ ಓದಲಾಗದೆ ಸರಕಾರಿ ಕಾಲೇಜುಗಳಲ್ಲೇ ಓದಬೇಕಾದ ಅನಿವಾರ್ಯತೆಯೂ ಇದೆ.

ಆದ್ದರಿಂದ ರಾಜ್ಯದ ಶಿಕ್ಷಣ ಮಂತ್ರಿಗಳು ಮತ್ತು ಸಂಬಂಧ ಪಟ್ಟ ಅಧಿಕಾರಿಗಳು ಈ ಭಾಗದ ವಿದ್ಯಾರ್ಥಿಗಳ ಪಿಯುಸಿ ಕಳಪೆ ಫಲಿತಾಂಶಕ್ಕೆ ಮೂಲ ಕಾರಣ ಹುಡುಕಿ ಶಿಕ್ಷಣ ಉನ್ನತಿಗೆ ಇನ್ನಾದರೂ ಗಮನ ಹರಿಸಬೇಕು. ಅಲ್ಲದೆ ಸರಕಾರಿ ಕಾಲೇಜುಗಳಿಗೆ ಅಗತ್ಯವಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಪ್ರಯತ್ನಿಸಬೇಕು.
 

Writer - -ಮೌಲಾಲಿ ಕೆ.ಬೋರಗಿ. ಸಿಂದಗಿ

contributor

Editor - -ಮೌಲಾಲಿ ಕೆ.ಬೋರಗಿ. ಸಿಂದಗಿ

contributor

Similar News