ಮಾಂಗಲ್ಯ ಸರ ಕಳವು
Update: 2017-05-17 19:38 IST
ಬೆಂಗಳೂರು, ಮೇ 17: ಮನೆಯ ಬಾಗಿಲು ತೆರೆದು ಮಲಗಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ದುಷ್ಕರ್ಮಿಯೊಬ್ಬ ಕಸಿದು ಪರಾರಿಯಾಗಿರುವ ಘಟನೆ ಇಲ್ಲಿನ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುರುಬರಹಳ್ಳಿಯ ಕಾವೇರಿ ನಗರದ ಪೈಪ್‌ಲೈನ್ ರಸ್ತೆಯಲ್ಲಿ ವಾಸಿಸುತ್ತಿದ್ದ ಜಯಲಕ್ಷ್ಮೀ(32) ಎಂಬವರ ಸರ ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಮುಂಜಾನೆ 4ರ ವೇಳೆ ಮನೆಯ ಮುಂಬಾಗಿಲು ತೆಗೆದುಕೊಂಡು ಮಲಗಿದ್ದರು. ಈ ವೇಳೆ ಬಂದ ದುಷ್ಕರ್ಮಿಯೊಬ್ಬ ಅವರ ಕತ್ತಿನಲ್ಲಿದ್ದ 26 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ದೋಚಿ ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಬಸವೇಶ್ವರನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.