ಆತ್ಮಹತ್ಯೆಗೆ ಯತ್ನ
Update: 2017-05-17 19:39 IST
ಬೆಂಗಳೂರು, ಮೇ 17: ಯುವಕನೊಬ್ಬ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಲ್ಲಿನ ವಯ್ಯಿಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಯ್ಯಲಿಕಾವಲ್‌ನ ದೇವಿಕುಮಾರ್ (23) ಎಂಬಾತ ಯುವಕ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಗಂಭೀರವಾಗಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವಿಕುಮಾರ್ ಸ್ಥಿತಿ ಚಿಂತಾಜನಕವಾಗಿದೆ. ಆತ್ಮಹತ್ಯೆ ಯತ್ನಕ್ಕೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ವಯ್ಯೆಲಿಕಾವಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.