×
Ad

ಇಬ್ಬರು ಐಎಎಸ್ ಅಧಿಕಾರಿಗಳು ಲಕ್ನೋಗೆ: ಸಿದ್ದರಾಮಯ್ಯ

Update: 2017-05-17 19:47 IST

ಬೆಂಗಳೂರು, ಮೇ 17: ಉತ್ತರ ಪ್ರದೇಶದಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಐಎಎಸ್ ಅಧಿಕಾರಿಗಳಾದ ಅಭಿರಾಂ ಶಂಕರ್, ಪಂಕಜ್ ಕುಮಾರ್ ಪಾಂಡೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲಕ್ನೋಗೆ ಕಳುಹಿಸಿದ್ದಾರೆ.

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವಿಗೆ ಅತೀವ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ , ಅತ್ಯಂತ ಕಿರಿಯ ವಯಸ್ಸಿನಲ್ಲೆ ತಿವಾರಿ ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ಅವರು ಆಹಾರ ಇಲಾಖೆ ಆಯುಕ್ತ ಹುದ್ದೆಯಲ್ಲಿದ್ದರು ಎಂದು ಸ್ಮರಿಸಿದರು.

ಅನುರಾಗ್ ತಿವಾರಿ ಅವರ ಸಾವಿಗೆ ಕಾರಣವೇನೆಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಪ್ರಕರಣದ ಬಗ್ಗೆ ಮಾಹಿತಿ ಪಡೆಯಲು ಇಬ್ಬರು ಅಧಿಕಾರಿಗಳನ್ನು ಲಕ್ನೋಗೆ ಕಳುಹಿಸಲಾಗಿದೆ. ಆ ಅಧಿಕಾರಿಗಳ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದ ರಾಮಯ್ಯ ಮಾಧ್ಯಮಗಳಿಗೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News