×
Ad

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರವಾಸ

Update: 2017-05-17 21:05 IST

ಉಡುಪಿ, ಮೇ 17: ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮೇ 18ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 9.30ಕ್ಕೆ ಬನ್ನಂಜೆ ಶಿರಿಬೀಡುವಿನಲ್ಲಿ ಗ್ಯಾಸ್ ಬಂಕ್ ಉದ್ಘಾಟನೆ, 10.15ಕ್ಕೆ ಉಡುಪಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಜೂನಿಯರ್ ರ್ಯಾಂಕಿಂಗ್ ಟೂರ್ನಮೆಂಟ್ ಉದ್ಘಾಟನೆ, 10.30ಕ್ಕೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಎಐಸಿಸಿ ಕಾರ್ಯದರ್ಶಿ ಪಿ.ಸಿ.ವಿಷ್ಣುನಾದ್ ಭೇಟಿ, 2.30ಕ್ಕೆ ಬನ್ನಂಜೆ ಪ್ರವಾಸಿ ಮಂದಿರದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಜಿಲ್ಲಾಧಿಕಾರಿಗಳ ಸಭೆ, ಮಧ್ಯಾಹ್ನ 3 ಗಂಟೆಗೆ ತೆಂಕನಿಡಿಯೂರು ಪಂಚಾಯತ್ ಸಭಾಭವನದಲ್ಲಿ ಗ್ರಾಮ ಮಟ್ಟದ ಜನಸಂಪರ್ಕ ಸಭೆ, ಸಂಜೆ 6.30ಕ್ಕೆ ಕೋಟೆ-ಮಟ್ಟು ಮಹಾಕಾಳಿ ದೇವಸ್ಥಾನದಲ್ಲಿ ಗೋಲ್‌ಮಾಲ್ ತುಳು ಸಿನೆಮಾದ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News