ಕಾರು-ಬೈಕ್ ಗಳ ಢಿಕ್ಕಿಯಿಂದ ಪೆಟ್ರೋಲ್ ಟ್ಯಾಂಕ್ ಸ್ಫೋಟ: ಇಬ್ಬರು ಮೃತ್ಯು; ಐವರಿಗೆ ಗಂಭಿರ ಗಾಯ
Update: 2017-05-17 22:30 IST
ಇಂದೋರ್, ಮೇ 17: ಕಾರು ಹಾಗೂ ಎರಡು ಬೈಕ್ ಗಳು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡು ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಶುಜಲ್ಪುರದಲ್ಲಿ ನಡೆದಿದೆ.
ಅಪಘಾತದ ತೀವ್ರತೆಗೆ ಬೈಕ್ ಗಳು ಹೊತ್ತಿ ಉರಿಯಲಾರಂಭಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಶುಜಲ್ಪುರ ಪೊಲೀಸರು ತಿಳಿಸಿದ್ದಾರೆ. ಅಪಘಾತದ ತೀವ್ರತೆಗೆ ಎಸೆಯಲ್ಪಟ್ಟ ಬೈಕ್ ನ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡು ಹೊತ್ತಿ ಉರಿಯಲಾರಂಭಿಸಿದೆ. ಮೂರು ವಾಹನಗಳಿಗೂ ಬೆಂಕಿ ತಗಲಿದ್ದು, ಒಬ್ಬರು ಸಜೀವದಹನವಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಈ ಬಗ್ಗೆ ಶಾಜಾಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.