2ನೆ ದಿನ ಪೂರೈಸಿದ ಪಶು ವೈದ್ಯಕೀಯ ಪರೀಕ್ಷಕರ ಮುಷ್ಕರ

Update: 2017-05-17 18:31 GMT

ಬೆಳ್ತಂಗಡಿ, ಮೇ 17: ಹಲವು ವರ್ಷದಿಂದ ನೆನೆಗುದಿಗೆ ಬಿದ್ದಿರುವ ವೃಂದ ಹಾಗೂ ನೇಮಕಾತಿ ನಿಯಮಗಳಿಗೆ ಅಂತಿಮ ಅಧಿಸೂಚನೆ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪಶು ವೈದ್ಯಕೀಯ ಸಂಘ, ಪಶು ವೈದ್ಯಕೀಯ ಪರೀಕ್ಷಕರ ಸಂಘ, ಪಶು ವೈದ್ಯಕೀಯ ಸಹಾಯಕರ ಸಂಘಗಳ ಸದಸ್ಯರು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರವು ಬುಧವಾರ 2ನೆ ದಿನ ಪೂರೈಸಿದೆ.

ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸರಕಾರ ಯಾವುದೇ ಸ್ಪಂದನೆ ನೀಡದಿರುವ ಹಿನ್ನೆಲೆ ಸಂಘಗಳು ಈ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ಸರಕಾರ ನಮ್ಮ ಬೇಡಿಕೆ ಈಡೇರಿಸುವವರೆಗೆ ಮುಷ್ಕರ ಮುಂದುವರಿಯುತ್ತದೆ ಎಂದು ಸಂಘ ಗಳ ಮುಖಂಡರು ತಿಳಿಸಿದ್ದಾರೆ.

ಇದೇ ಸಂದರ್ಭ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಕೆ.ವಸಂತ ಬಂಗೇರ ಅವರಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಪಶು ವೈದ್ಯಕೀಯ ಪರೀಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಜಯಕೀರ್ತಿ ಜೈನ್, ಡಾ.ರತ್ನಾಕರ ಮಲ್ಯ, ಡಾ.ವಿನಯ, ಡಾ.ಯತೀಶ್, ಡಾ.ಪ್ರಶಾಂತ್, ಯಾದವ್, ಪ್ರಶಾಂತ್, ಶ್ರೀಧರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News