ರಾಜ್ಯದಲ್ಲಿ ಬಿಜೆಪಿಯ ಬರ ಅಧ್ಯಯನಕ್ಕೆ ಚಾಲನೆ
Update: 2017-05-18 12:19 IST
ಬೆಂಗಳೂರು, ಮೇ 18: ತಮ್ಮ ನಡುವಿನ ಭಿನ್ನಮತಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿರುವ ರಾಜ್ಯ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ.
ಐದು ದಿನಗಳ ಬರ ಅಧ್ಯಯನ ಪ್ರವಾಸಕ್ಕೆ ಸಿದ್ಧಗಂಗಾ ಮಠದ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಇಂದು ಬೆಳಗ್ಗೆ ಚಾಲನೆ ನೀಡಿದರು. ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಅನಂತಕುಮಾರ್, ವಿಧಾನ ಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ.