×
Ad

ಅಂಧರ ಶಾಲೆಯಲ್ಲಿ ಎಚ್.ಡಿ. ದೇವೇಗೌಡರ ಜನ್ಮ ದಿನಾಚರಣೆ

Update: 2017-05-18 17:53 IST

ಚಿಕ್ಕಮಗಳೂರು, ಮೇ 18: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಜೆಡಿಎಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಗುರುವಾರ ನಗರದಲ್ಲಿ ಸಂಭ್ರಮದಿಂದ ಆಚರಿಸಿದರು.
  ಪಕ್ಷದ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಅವರ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಆವರಣದ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಮಾಜಿ ಪ್ರಧಾನಿಗೆ ಶುಭ ಆರೈಸಿದರು. ನಂತರ ಆಶಾಕಿರಣ ಅಂಧ ಮಕ್ಕಳ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಹಣ್ಣು ವಿತರಿಸಿದರು.
  ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್, ಜಿಲ್ಲಾ ವಕ್ತಾರ ಹೊಲದಗದ್ದೆ ಗಿರೀಶ್ ಮಾತನಾಡಿದರು.
  ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಹೆಚ್. ದೇವರಾಜ್, ಮಾಜಿ ಜಿಲ್ಲಾಧ್ಯಕ್ಷ ಮಂಜಪ್ಪ, ಮಹಾಪ್ರಧಾನ ಕಾರ್ಯದರ್ಶಿ ಜಿ.ಎಸ್.ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಡಿ.ರಮೇಶ್, ಜಮೀಲ್ ಅಹಮದ್, ಮುಕ್ತಿಯಾರ್ ಅಹಮದ್, ಮಹಿಳಾ ಘಟಕದ ನಗರಾಧ್ಯಕ್ಷೆ ಜಯಂತಿ, ಯುವ ಘಟಕದ ಜಿಲ್ಲಾಧ್ಯಕ್ಷ ವಿನಯ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News