×
Ad

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್‌ನಿಂದ ಸನ್ಮಾನ

Update: 2017-05-18 17:58 IST

ಮೂಡುಬಿದಿರೆ, ಮೇ 18: ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ರೋಟರಿ ಪಿಯು ಕಾಲೇಜಿನ ವಿದ್ಯಾರ್ಥಿಗಳನ್ನು ಹಾಗೂ ಎಸೆಸೆಲ್ಸಿ ಯಲ್ಲಿ ಶೇ.100 ಫಲಿತಾಂಶ ಪಡೆದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸಾಧಕ ವಿದ್ಯಾರ್ಥಿಗಳನ್ನು ಮೂಡುಬಿದಿರೆ ರೋಟರಿ ಕ್ಲಬ್‌ನ ವತಿಯಿಂದ ರೋಟರಿ ಸಮ್ಮಿಲನ್ ಸಭಾಭವನದಲ್ಲಿ ಸನ್ಮಾನಿಸಲಾಯಿತು.

600ಕ್ಕೂ ಅಧಿಕ ಅಂಕ ಪಡೆದ ಎಸೆಸೆಲ್ಸಿ ಯ 28 ವಿದ್ಯಾರ್ಥಿಗಳು, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ವಿದ್ಯಾರ್ಥಿಗಳ ಸಾಧನೆಗೆ ನೆರವಾದ ಶಿಕ್ಷಕರ ಪರವಾಗಿ ರೋಟರಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ವಿನ್ಸೆಂಟ್ ಡಿಕೋಸ್ತಾ ಅವರನ್ನು ಸನ್ಮಾನಿಸಲಾಯಿತು.

ರೋಟರಿ ಎಜ್ಯಕೇಶನ್ ಸೊಸೈಟಿಯ ಅಧ್ಯಕ್ಷ ಕೆ.ಅಮರನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿ ಸಾಧಕರ ವಿದ್ಯಾರ್ಥಿಗಳನ್ನು ಗೌರವಿಸಿದರು. ರೋಟರಿ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ನಾರಾಯಣ ಪಿ.ಎಂ ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಟರಿ ಅಧ್ಯಕ್ಷ ಮಹಮ್ಮದ್ ಶರೀಫ್ ಸ್ವಾಗತಿಸಿದರು. ಕಾರ್ಯದರ್ಶಿ ಡಾ.ಸುದೀಪ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News