ಮೇ 20 : ಮಂಗಳೂರು ತಾ. ಪಂ ನೂತನ ಕಟ್ಟಡಕ್ಕೆ ಶಿಲಾನ್ಯಾಸ
ಮಂಗಳೂರು, ಮೇ 18: ಮಂಗಳೂರು ತಾಲೂಕು ಪಂಚಾಯತ್‌ಗೆ 3.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ತಾಲೂಕು ಪಂಚಾಯತ್‌ಗೆ ಮೇ 21ರಂದು ಬೆಳಗ್ಗೆ 10:30 ಕ್ಕೆ ರಾಜ್ಯದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಶಿಲಾನ್ಯಾಸವನ್ನು ಹಾಲಿ ಕಚೇರಿಯ ಆವರಣದಲ್ಲಿ ನೆರವೇರಿಸಲಿದ್ದಾರೆ ಎಂದು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅರಣ್ಯ, ಪರಿಸರ ಹಾಗೂ ಜೀವಿ ಶಾಸ್ತ್ರ ಸಚಿವ ಬಿ.ರಮಾನಾಥ ರೈ ವಹಿಸಲಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ಶಾಸಕ ಹಾಗೂ ರಾಜ್ಯ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷ ಜೆ.ಆರ್. ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮುಹಮ್ಮದ್ ಮೋನು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ಪೂರ್ಣಿಮಾ ಗಣೇಶ್ ಕಾರ್ಯನಿರ್ವಹಣಾಧಿಕಾರಿ ಜಿ.ಸದಾನಂದ ಸದಸ್ಯರಾದ ಶ್ರಿಧರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.