ಸಚಿವ ಸಂತೋಷ್ ಲಾಡ್ ವಿರುದ್ಧ ಜಾಮೀನು ರಹಿತ ವಾರೆಂಟ್
Update: 2017-05-18 22:14 IST
ಬೆಂಗಳೂರು, ಮೇ 18: ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ದಾಖಲಾಗಿದ್ದ ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ 42ನೆ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಈ ಸಂಬಂಧ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ 42ನೆ ಎಸಿಎಂಎಂ ನ್ಯಾಯಪೀಠ ಈ ಆದೇಶ ನೀಡಿತು.
ಸಚಿವ ಸಂತೋಷ್ ಲಾಡ್ ಅವರು ಸತತವಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಪೀಠವು ಈ ಆದೇಶ ಹೊರಡಿಸಿದೆ. 2015ರಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ಸಂತೋಷ್ ಲಾಡ್ ವಿರುದ್ಧ ಚೆಕ್‌ಬೌನ್ಸ್‌ಗೆ ಸಂಬಂಧಪಟ್ಟಂತೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಲ್ಲದೆ, ಸಂತೋಷ್ ಲಾಡ್‌ಗೆ ವಿಚಾರಣೆಗೆ ಹಾಜರಾಗಬೇಕೆಂದು ನ್ಯಾಯಪೀಠವು ಹಲವು ಬಾರಿ ಆದೇಶ ಹೊರಡಿಸಿದರೂ ಹಾಜರಾಗಿರಲಿಲ್ಲ. ಹೀಗಾಗಿ, ಸಂತೋಷ್ ಲಾಡ್ ಅವರನ್ನು ಮೇ 22ರಂದು ಕೋರ್ಟ್‌ಗೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.