ಕುಸಿದ ಸೇತುವೆ..!
Update: 2017-05-18 23:43 IST
ದಕ್ಷಿಣ ಗೋವಾದ ಕರ್ಚೊರೆಂ ಬಳಿ ಗುರುವಾರ ಸಂಜೆ ಕಾಲುಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವಾರು ಜನರು ನದಿಯ ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದಾರೆ. ಸುಮಾರು 10 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿಯವರೆಗೂ ರಕ್ಷಣಾ ಕಾರ್ಯ ಮುಂದುವರಿದಿತ್ತು. ಹತ್ತು ಜನರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ.