×
Ad

ಅಕ್ರಮ ಮರ ಸಾಗಾಟ ಪತ್ತೆ: ಓರ್ವ ಸೆರೆ

Update: 2017-05-19 18:17 IST

ಪುತ್ತೂರು, ಮೇ 19: ಲಾರಿಯೊಂದರಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿದ ಅರಣ್ಯ ಇಲಾಖೆಯ ಅಧಿಕಾರಿಗಳು ಓರ್ವನನ್ನು ಬಂಧಿಸಿ, ಲಾರಿಯ ಸಹಿತ ಸುಮಾರು 3 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

ಪುತ್ತೂರು ತಾಲೂಕಿನ ಆರ್ಲಪದವು ನಿವಾಸಿ ಮಹಮ್ಮದ್ ಅರ್ಶದ್(23) ಬಂಧಿತ ಆರೋಪಿ. ಬಂಧಿತ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಕಾವು ಜಂಕ್ಷನ್‌ನಲ್ಲಿ ಲಾರಿಯಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಕಾರ್ಯಾಚರಣೆ ನಡೆಸಿದ ಜಾಲ್ಸೂರು ಶಾಖಾ ಉಪವಲಯ ಅರಣ್ಯ ಅಧಿಕಾರಿ ಪ್ರಕಾಶ್ ಟಿ.ಬಿ ಹಾಗೂ ಪುತ್ತೂರು ಶಾಖಾ ಉಪವಲಯ ಅರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ಅರಣ್ಯ ರಕ್ಷಕರಾದ ಕ್ಯಾತಲಿಂಗ ಸಿದ್ರಾಮ ಕ್ಯಾತನವರ, ಕಮಲಾಕ್ಷ ಶೆಟ್ಟಿ, ವಿಶ್ವನಾಥ ಗೌಡ, ಸಂಗಮೇಶ ಮತ್ತು ಚಾಲಕ ಜಗದೀಶ್ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 
ಮಂಗಳೂರು ವಿಭಾಗದ ಉಪವಲಯ ಸಂರಕ್ಷಣಾಧಿಕಾರಿ ಡಾ. ಕೆ. ಟಿ. ಹನುಮಂತಪ್ಪ ಅವರ ಮಾರ್ಗದರ್ಶನದಲ್ಲಿ ಪುತ್ತೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸುಬ್ರಹ್ಮಣ್ಯ ರಾವ್ ನಿರ್ದೇಶನದಲ್ಲಿ ಪುತ್ತೂರು ವಲಯ ಅರಣ್ಯಾಧಿಕಾರಿ ವಿ.ಪಿ. ಕಾರ್ಯಪ್ಪ ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News