×
Ad

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವಾಸ್ ವಿ. ಅಮೀನ್ ಆಯ್ಕೆ

Update: 2017-05-19 21:20 IST

ಉಡುಪಿ, ಮೇ 19: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ನ ಸಮಿತಿಗೆ ಗುರುವಾರ ನಡೆದ ಆಂತರಿಕ ಚುನಾವಣೆಯಲ್ಲಿ 1073 ಮತಗಳನ್ನು ಪಡೆದ ಕಾಪು ಕ್ಷೇತ್ರದ ವಿಶ್ವಾಸ್ ವಿ. ಅಮೀನ್ ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ

 ಒಟ್ಟು 11ಮಂದಿ ಸ್ಪರ್ಧಾಳುಗಳಿದ್ದು 7 ಮಂದಿ ಪ್ರಧಾನ ಕಾರ್ಯದರ್ಶಿ ಗಳಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಭಾರತೀಯ ಯುವ ಕಾಂಗ್ರೆಸ್ ನಿಂದ ಜಿಲ್ಲಾ ಚುನಾವಣಾಧಿಕಾರಿಯಾಗಿ ಸೂರಜ್ ಹಾಗೂ ವಿಧಾನಸಭಾ ಚುನಾವಣಾಧಿಕಾರಿಯಾಗಿ ಮನೀಶ್ ಕಾರ್ಯನಿರ್ವಹಿಸಿದರು.

ಇದೇ ವೇಳೆ ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಕ್ಕೂ ಕೂಡಾ ಚುನಾವಣೆ ನಡೆಯಿತು.

ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೆಲ್ವಿನ್ ಡಿಸೋಜ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಬಂಗೇರಾ ಆಯ್ಕೆಯಾಗಿದ್ದಾರೆ.

ಕಾರ್ಕಳ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ದೀಪಕ್ ಕೋಟ್ಯಾನ್, ಕುಂದಾಪುರ ಕ್ಷೇತ್ರದ ಯುವಕಾಂಗ್ರೆಸ್ ಅಧ್ಯಕ್ಷರಾಗಿ ಇಚ್ಚಿತಾರ್ಥ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ರವಿ ಆಯ್ಕೆಯಾಗಿದ್ದಾರೆ.

ಬೈಂದೂರು ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶೇಖರ್ ಪೂಜಾರಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News