×
Ad

ಮೇ 20: ಮಂಗಳೂರು ಇನ್ ಸ್ಟಿಟ್ಯೂಟ್ ಆಫ್ ಅಂಕಾಲಜಿ ಸ್ಪೆಷಾಲಿಟಿ ಕ್ಯಾನ್ಸರ್ ಆಸ್ಪತ್ರೆಯಿಂದ ವಿಶೇಷ ಕಾರ್ಯಕ್ರಮ

Update: 2017-05-19 23:46 IST

ಮಂಗಳೂರು,  ಮೇ 19: ಮಂಗಳೂರು ಇನ್ ಸ್ಟಿಟ್ಯೂಟ್ ಆಫ್ ಅಂಕಾಲಜಿ ಸ್ಪೆಷಾಲಿಟಿ ಕ್ಯಾನ್ಸರ್ ಆಸ್ಪತ್ರೆ 5ನೆ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಪಂಪ್ ವೆಲ್ ನಲ್ಲಿರುವ ಆಸ್ಪತ್ರೆಯ ಆವರಣದಲ್ಲಿ ನಡೆಯಲಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಿರಿಯ ಹೃದಯರೋಗ ತಜ್ಞ ಡಾ.ಎ.ವಿ.ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ

ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ಣಾಟಕ ಬ್ಯಾಂಕ್ ಮಾಜಿ ಚೇರ್ ಮೆನ್ ಅನಂತಕೃಷ್ಣರನ್ನು ಗೌರವಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News