×
Ad

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೀನಾಮೆ

Update: 2017-05-20 15:31 IST

ಬೆಳ್ತಂಗಡಿ,  ಮೇ 20: ಬೆಳ್ತಂಗಡಿ ನಗರ ಬ್ಲಾಕ್  ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ತಮ್ಮ ರಾಜೀನಾಮೆ ನಿರ್ಧಾರವನ್ನು ಇಂದು ಮಾಧ್ಯಮಗಳಿಗೆ ತಿಳಿಸಿರುವ ಹರೀಶ್ ಕುಮಾರ್, ತನ್ನ ಮಗ ಅಭಿನಂದನ್ ಅವರು ಮುನ್ನೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ತಂದೆ ಮತ್ತು ಮಗ ಮಹತ್ವದ ಹುದ್ದೆಯಲ್ಲಿ ಇರುವುದು ಸರಿಯಾಗುವುದಿಲ್ಲ ಎಂಬ ಕಾರಣದಿಂದ ಪಕ್ಷದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಪಕ್ಷದಲ್ಲಿ ಇದ್ದುಕೊಂಡು ಮುಂದೆಯೂ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News