ಉಡುಪಿ ಲೋಕಾಯುಕ್ತರಿಂದ ದೂರು ಸ್ವೀಕಾರ
ಉಡುಪಿ, ಮೇ 20: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾ ರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ.
ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಟಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಮೇ 23ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ, 25ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಬ್ರಹ್ಮಾವರ ಉಪತಹಸೀಲ್ದಾರರ ಕಚೇರಿಯಲ್ಲಿ, 27ರಂದು ಬೆಳಗ್ಗೆ 11ರಿಂದ 12.30ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ 30ರಂದು ಬೆಳಗ್ಗೆ 11ರಿಂದ 12.30ರವರೆಗೆ ಕುಂದಾಪುರ ಪ್ರವಾಸಿ ಮಂದಿರ ದಲ್ಲಿ ಸ್ವೀಕರಿಸಲಾಗುವುದು.
ಉಡುಪಿ ತಾಲೂಕಿನಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯುಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸ ಬಹುದಾಗಿದೆ. ಸಾರ್ವಜನಿಕರು ನಿಗದಿತ ದೂರು ಅರ್ಜಿಗಳಾದ ಪ್ರಪತ್ರ 1 ಮತ್ತು 2ನ್ನು ಪಡೆದು ಅಫಿದವಿತ್ ಮಾಡಿಸಿ ಸಂಬಂಧಪಟ್ಟ ದಾಖಲೆಗಳ ಪ್ರತಿ ಗಳೊಂದಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ತಮ್ಮ ಸರಕಾರಿ ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆಗಳಾದಲ್ಲಿ ಪೋಲಿಸ್ ಉಪಾಧೀಕ್ಷಕರು ಕರ್ನಾಟಕ ಲೋಕಾಯುಕ್ತ ಉಡುಪಿ ದೂ.ಸಂ.0820- 2527770 ಅಥವಾ 0820-2536661ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.