ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು
Update: 2017-05-20 21:16 IST
ಬೈಂದೂರು, ಮೇ 20: ಉಪ್ಪುಂದ ಗ್ರಾಮದ ದುರ್ಗಾಪರಮೇಶ್ವರಿ ದೇವ ಸ್ಥಾನದ ಸಮೀಪದ ರಾಘವೇಂದ್ರ ಮಠದ ಎದುರಿನ ರಸ್ತೆ ತಿರುವಿನಲ್ಲಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಶೇಷ ಖಾರ್ವಿ ಎಂದು ಗುರುತಿಸಲಾಗಿದೆ.
ಉಪ್ಪುಂದ ಕಡೆಯಿಂದ ವೇಗವಾಗಿ ಬಂದ ಬೈಕ್ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶೇಷ ಖಾರ್ವಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಶೇಷ ಖಾರ್ವಿ ಕುಂದಾಪುರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.