ಬೈಕ್ ಪಲ್ಟಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು
Update: 2017-05-21 18:35 IST
ಮೂಡುಬಿದಿರೆ, ಮೇ 21: ಎಡಪದವು ಬಳಿ ಶುಕ್ರವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ನವ್ಯಾ ಶೆಟ್ಟಿ (21) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ನಡೆದ ಕಂಪನಿಯೊಂದರ ಕ್ಯಾಂಪಸ್ ಇಂಟರ್ ವ್ಯೂವ್ ಗೆ ತನ್ನ ಸಹಪಾಠಿ ದೇವಿ ಪ್ರಸಾದ್ ಶೆಟ್ಟಿ ಎಂಬವರೊಂದಿಗೆ ಬೈಕ್‌ನಲ್ಲಿ ತೆರಳಿದ್ದರು. ಎಡಪದವು ಬಳಿ ನಿಯಂತ್ರಣ ತಪ್ಪಿದ ಬೈಕ್ ಪಲ್ಟಿಯಾಗಿ ನವ್ಯಾ ಶೆಟ್ಟಿ ಗಂಭೀರ ಗಾಯಗೊಂಡಿದ್ದರು. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.