ಬಾಲಕಿಗೆ ಕಿರುಕುಳಕ್ಕೆ ಯತ್ನ: ಆರೋಪಿ ಸೆರೆ

Update: 2017-05-21 15:14 GMT

ಹನೂರು, ಮೇ 21: ಪಕ್ಕದ ಮನೆಯ 9ನೆ ತರಗತಿಯಲ್ಲಿ ಓದುತ್ತಿರುವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಇಲ್ಲಿನ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಮಣಗಳ್ಳಿ ಗ್ರಾಮದ ವೆಂಕಟೇಶ್ (42) ಬಂಧಿತ ಆರೋಪಿ ಎಂದು ಗುರುತಿಸಲಾಗಿದ್ದು, ಈತ ಶನಿವಾರ ಮಧ್ಯಾಹ್ನ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ತನ್ನ ಮನೆಗೆ ಕರೆಸಿ ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದು, ಈ ಬಗ್ಗೆ ಮಾಹಿತಿ ಅರಿತ ಬಾಲಕಿಯ ಮನೆಯವರು ಆರೋಪಿಯ ವಶದಿಂದ ಬಾಲಕಿಯನ್ನು ಬಿಡಿಸಿಕೊಂಡು ಬಂದಿರುವುದಾಗಿ ಇಲ್ಲಿನ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.  

ಹನೂರು ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News