ಉಡುಪಿ ಲೋಕಾಯುಕ್ತರಿಂದ ದೂರು ಸ್ವೀಕಾರ

Update: 2017-05-21 18:26 GMT

ಉಡುಪಿ, ಮೇ 21: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿೆ.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಟಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಮೇ 23ರಂದು ಪೂರ್ವಾಹ್ನ 11ರಿಂದ ಮಧ್ಯಾಹ್ನ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ, 25ರಂದು ಪೂರ್ವಾಹ್ನ 11ರಿಂದ ಮಧ್ಯಾಹ್ನ 12:30ರವರೆಗೆ ಬ್ರಹ್ಮಾವರ ಉಪತಹಶೀಲ್ದಾರ್‌ರ ಕಚೇರಿಯಲ್ಲಿ, 27ರಂದು ಪೂರ್ವಾಹ್ನ 11ರಿಂದ 12:30ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ 30ರಂದು ಬೆಳಗ್ಗೆ 11ರಿಂದ 12:30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂಧ ಪಟ್ಟ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯುಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಸಾರ್ವಜನಿಕರು ನಿಗದಿತ ದೂರು ಅರ್ಜಿಗಳಾದ ಪ್ರಪತ್ರ 1 ಮತ್ತು 2ನ್ನು ಪಡೆದು ಅಫಿದಾವಿತ್ ಮಾಡಿಸಿ ಸಂಬಂಧಪಟ್ಟ ದಾಖಲೆಗಳ ಪ್ರತಿಗಳೊಂದಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ತಮ್ಮ ಸರಕಾರಿ ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆಗಳಾದಲ್ಲಿ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಲೋಕಾಯುಕ್ತ ಉಡುಪಿ ದೂ.ಸಂ.:0820-2527770 ಅಥವಾ 0820-2536661ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News