ರೌಡಿಶೀಟರ್ ಕೊತ್ತನೂರಿನ ಅಯೂಬ್ ಹತ್ಯೆ

Update: 2017-05-22 12:41 GMT

 ಬೆಂಗಳೂರು, ಮೇ 22: ರೌಡಿಶೀಟರ್ ಕೊತ್ತನೂರಿನ ಅಯೂಬ್‌ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತೈಗೈದಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ.

ಅಯೂಬ್ (35) ವಿರುದ್ಧ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪವಿದ್ದು, ಕೊತ್ತನೂರು ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿ ಈತನ ಹೆಸರಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರವಿವಾರ ರಾತ್ರಿ ಐವರು ಅಪರಿಚಿತರು ಅಯೂಬ್‌ನನ್ನು ಭೇಟಿಯಾಗಿ ಯಾವುದೋ ವಿಚಾರದ ಬಗ್ಗೆ ಮಾತನಾಡಬೇಕು ಎಂದು ಹೇಳಿ ಕೊತ್ತನೂರಿನ ಖಾಲಿ ನಿವೇಶನಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಅವರ ನಡುವೆ ಜಗಳ ನಡೆದಿದೆ. ಜಗಳ ತಾರಕಕ್ಕೇರಿ ಮಾರಕಾಸ್ತ್ರಗಳಿಂದ ಅಯೂಬ್‌ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಯೂಬ್ ಅವರ ಪರಿಚಯಸ್ಥರೇ ಈ ಕೃತ್ಯ ನಡೆಸಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News