ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ಮುತ್ತುರಾಜ್‌ಗೆ ಜೀವಾವಧಿ ಶಿಕ್ಷೆ

Update: 2017-05-22 15:44 GMT

ಬೆಂಗಳೂರು, ಮೇ 22: ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಸಂಬಂಧ ಆರೋಪಿ ರಾಜ ಯಾನೆ ಮುತ್ತುರಾಜ್‌ಗೆ ಬೆಂಗಳೂರಿನ 55ನೆ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಸೋಮವಾರ ಬೆಂಗಳೂರಿನ 55ನೆ ಸೆಷನ್ಸ್ ನ್ಯಾಯಾಲಯವು ಪ್ರಕರಣವನ್ನು ಕೈಗೆತ್ತಿಕೊಂಡು ವಿಚಾರಣೆ ನಡೆಸಿ ಪ್ರಕರಣದ ಆರೋಪಿ ರಾಜಾ ಯಾನೆ ಮುತ್ತುರಾಜ್‌ಗೆ ಜೀವಾವಧಿ ಶಿಕ್ಷೆಗೆ ಆದೇಶಿಸಿದೆ.

ಪ್ರಕರಣದ ವಿವರ: 2012ರ ಸಾಲಿನಲ್ಲಿ ನಗರದ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ವಿದ್ಯಾರ್ಥಿನಿಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ ಜೀವಾವದಿ ಶಿಕ್ಷೆಯನ್ನು ವಿಧಿಸಿತ್ತು. ಆದರೆ, ಮತ್ತೋರ್ವ ಆರೋಪಿ ರಾಜ ಯಾನೆ ಮುತ್ತುರಾಜ್ ಮಾತ್ರ ತಲೆಮರೆಸಿಕೊಂಡಿದ್ದ. ಇತ್ತೀಚೆಗೆ ಪೊಲೀಸರು ಈತನನ್ನು ಬಂಧಿಸಿದ್ದು, ಸೋಮವಾರ ಬೆಂಗಳೂರಿನ 55ನೆ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸಿದ ಸೆಷನ್ಸ್ ನ್ಯಾಯಾಲಯ ಮುತ್ತುರಾಜ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ, ಆದೇಶ ಹೊರಡಿಸಿದೆ. ಆರೋಪಿಗೆ ಮರಣದಂಡನೆ ಶಿಕ್ಷೆ ನೀಡುವಂತೆ ಅಭಿಯೋಜಕ ಎಸ್‌ಎನ್ ಹಿರೇಮನಿ ಅವರು ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News