ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಸಂಘದಿಂದ ಮಕ್ಕಳಿಗೆ ಪುಸ್ತಕ ವಿತರಣೆ

Update: 2017-05-22 18:55 GMT

ಮಂಗಳೂರು, ಮೇ 23: ಸಂಘಟನೆಗಳು ನೀಡುವ ಪುಸ್ತಕ ಪಡೆಯುವ ಮಕ್ಕಳು ಮುಂದೆ ಉನ್ನತ ಶಿಕ್ಷಣದೊಂದಿಗೆ ದೇಶದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಉದ್ಯೋಗ ಪಡೆದು ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪ್ರಯತ್ನಿಸಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದರು.

ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಸೋಮವಾರ ಸಂಘದ ವಠಾರದಲ್ಲಿ ಅರ್ಹ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮನಪಾ ಉಪ ಮೇಯರ್ ರಜನೀಸ್ ಕಾಪಿಕಾಡ್, ಮಾಜಿ ಮೇಯರ್ ಕೆ.ಅಶ್ರಫ್ ಮಾತನಾಡಿದರು. ಕಾರ್ಯಕ್ರಮದಲ್ಲಿ 3 ಲಕ್ಷ ರೂ. ವೆಚ್ಚದಲ್ಲಿ 450 ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ಗುರುಪುರ ಬಂಗ್ಲೆಗುಡ್ಡೆ ಬದ್ರಿಯಾ ಜುಮಾ ಮಸೀದಿಗೆ 13 ಸಾವಿರ ರೂ. ಮೌಲ್ಯದ ಅದ್ಸಾನ್ ಸಮಯವುಳ್ಳ ಡಿಜಿಟಲ್ ಗಡಿಯಾರ ವಿತರಿಸಲಾಯಿತು.
 
ಅಧ್ಯಕ್ಷ ಜೆ.ಮಹಮ್ಮದ್ ಇಸಾಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಪೊರೇಟರ್‌ಗಳಾದ ಅಬ್ದುಲ್ ಲತೀಫ್, ಮುಹಮ್ಮದ್ ಕುಂಜತ್ತಬೈಲ್, ಟ್ರಾಲ್‌ಬೋಟ್ ಯೂನಿಯನ್ ಅಧ್ಯಕ್ಷ ನಿತಿನ್ ಕುಮಾರ್, ಸಹಕಾರಿ ಸಂಘಗಳ ಜಿಲ್ಲಾ ಉಪನಿಬಂಧಕ ಬಿ.ಕೆ.ಸಲೀಂ, ಮಂಗಳೂರು-ಮಲ್ಪೆಮೀನುಗಾರಿಕೆ ಜಂಟಿ ನಿರ್ದೇಶಕ ಗಣಪತಿ ಭಟ್, ಹಸಿಮೀನು ಕಮಿಷನ್ ಏಜೆಂಟರ ಸಂಘದ ಅಧ್ಯಕ್ಷ ಭರತ್ ಭೂಷಣ್, ಮಂಗಳೂರು ಅಲ್ಪಸಂಖ್ಯಾತ ಮೀನುಗಾರರ ಗ್ರಾಹಕರ ಸಹಕಾರ ಸಂಘದ ಅಧ್ಯಕ್ಷ ಹುಸೈನ್ ಬೋಳಾರ್, ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸುಲೈಮಾನ್ ಎಂ.ಎಸ್.ಎನ್, ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್, ನಿರ್ದೇಶಕರಾದ ಎಂ.ಎ.ಗಫೂರ್, ಟಿ.ಎಚ್.ಹಮೀದ್, ಯು.ಟಿ.ಅಹ್ಮದ್ ಶರೀಫ್, ಎಸ್.ಎಂ.ಇಬ್ರಾಹೀಂ, ಎ.ಎಂ.ಕೆ.ಮುಹಮ್ಮದ್ ಇಬ್ರಾಹೀಂ, ಮುಹಮ್ಮದ್ ಅಶ್ರಫ್, ಎಸ್.ಕೆ. ಇಸ್ಮಾಯೀಲ್, ಪಿ.ಪಿ.ಮೊಯಿನ್ ಪಾಷ, ಬಿ. ಇಬ್ರಾಹೀಂ ಕೆ.ಎಂ.ಎಚ್., ಸೂದತ್ ಪಿ.ಪಿ ಹಾಗೂ ಫಾತಿಮತ್ ಝಹರಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಅಬ್ದುಲ್ ಲತೀಫ್ ಉಪಸ್ಥಿತರಿದ್ದರು.

ಮಂಗಳೂರು ತಾಪಂ ಮಾಜಿ ಸದಸ್ಯ ಮಹಮ್ಮದ್ ಮುಸ್ತಫಾ ಮಲಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News