ಪ್ರೊ ಕಬಡ್ಡಿ ಲೀಗ್ ನಲ್ಲಿ ಪಾಕ್ ಆಟಗಾರರಿಗೆ ಅವಕಾಶ ಬಂದ್

Update: 2017-05-23 04:42 GMT

ಹೊಸದಿಲ್ಲಿ, ಮೇ 23:ಭಯೋತ್ಪಾದನೆಯನ್ನು ಬೆಂಬಲಿಸುವ ಪಾಕಿಸ್ತಾನದ ವಿರುದ್ಧ ಭಾರತ ಸರಕಾರ ಕಠಿಣ ನಿರ್ಧಾರ ಕೈಗೊಂಡಿದ್ದು,    ಪ್ರೊ ಕಬಡ್ಡಿ ಲೀಗ್ ನಲ್ಲಿ ಭಾಗವಹಿಸಲು ಪಾಕಿಸ್ತಾನದ ಆಟಗಾರರಿಗೆ ಅವಕಾಶ ನಿರಾಕರಿಸಿದೆ.

ಐದನೆ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಜೂ.25ರಂದು ಆರಂಭವಾಗಲಿದ್ದು, ಪಾಕಿಸ್ತಾನದ ಆಟಗಾರರಿಗೆ ಕಬಡ್ಡಿ ಲೀಗ್ ನಲ್ಲಿ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಸ್ಪಷ್ಟಪಡಿಸಿದ್ದಾರೆ. 
ಪ್ರೋ ಕಬಡ್ಡಿ ಲೀಗ್ ನ ಆಯೋಜಕರು ಪಾಕಿಸ್ತಾನಿ ಆಟಗಾರರನ್ನು ಹರಾಜು ಪ್ರಕ್ರಿಯೆಯಲ್ಲಿ ಪರಿಗಣಿಸಬಹುದು. ಆದರೆ ಆಯ್ಕೆಯಾದ ಪಾಕ್  ಆಟಗಾರರು ಕಬಡ್ಡಿ ಲೀಗ್ ನಲ್ಲಿ ಆಡಬೇಕೋ ಬೇಡವೋ ಎಂಬುದನ್ನು ಭಾರತ ಸರಕಾರ  ಮಾತ್ರ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ಇದರೊಂದಿಗೆ ಪ್ರೊ ಕಬಡ್ಡಿಯಲ್ಲಿ ಪಾಕ್ ಆಟಗಾರರಿಗೆ ಆಡುವ ಅವಕಾಶ ದೂರವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News