ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಸೆರೆ
Update: 2017-05-23 19:18 IST
ಉಡುಪಿ, ಮೇ 23: ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಬೆಂಗ್ರೆ ಎಂಬಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಕೋಡಿಬೆಂಗ್ರೆಯ ಯಾದವ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಈತ ಮನೆ ಸಮೀಪದ ಬಾಲಕಿಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ಸ್ಥಳೀಯರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.