ಸಾಮಾಜಿಕ ಹೋರಾಟಗಾರ್ತಿ ಸುಶೀಲಮ್ಮರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ

Update: 2017-05-23 18:14 GMT

 ಮಂಗಳೂರು, ಮೇ 23: ಸಾಮಾಜಿಕ ಹೋರಾಟಗಾರ್ತಿ ಎಸ್.ಜಿ. ಸುಶೀಲಮ್ಮ ಅವರನ್ನು 2017ನೆ ಸಾಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಡಾ. ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಕನ್ನಡಪರ ಹೋರಾಟಗಾರ ಸಿ.ಕೆ. ರಾಮೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ, ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಅವರನ್ನೊಳಗೊಂಡ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. 

ಪ್ರಶಸ್ತಿ ಯು 25,000 ರೂ. ನಗದು ಪುರಸ್ಕಾರವನ್ನೊಳಗೊಂಡಿದ್ದು, ಪ್ರಶಸ್ತಿ ಫಲಕ ನೀಡಿ ಪ್ರದಾನ ಮಾಡಲಾಗುವುದು.

ಸಾಮಾಜಿಕ ನ್ಯಾಯಕ್ಕಾಗಿ ಹಾಗೂ ಹಿಂದುಳಿದ ವರ್ಗಗಳ ಹಿತರಕ್ಷಣೆ ಮತ್ತು ಶೋಷಿತ ಮಹಿಳೆಯರ ಪರ ಸಂಘ-ಸಂಸ್ಥೆಗಳ ಮೂಲಕ ಅಥವಾ ಸ್ವತಂತ್ರವಾಗಿ ಹೋರಾಟ ಮಾಡುತ್ತಿರುವ ಮಹನೀ ಯರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಾ ಬಂದಿರುತ್ತದೆ. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಿಸಿರುವ ಈ ದತ್ತಿ ಪ್ರಶಸ್ತಿಯ ಪುರಸ್ಕೃತರನ್ನು ರಾಜ್ಯಮಟ್ಟದಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News