ನಾಳೆ ಪೌರಕಾರ್ಮಿಕರಿಂದ ಧರಣಿ

Update: 2017-05-23 18:27 GMT

ಮಂಗಳೂರು, ಮೇ 23: ಸರಕಾರ ಮಾರ್ಚ್ ತಿಂಗಳೊಳಗೆ 13 ಸಾವಿರ ಪೌರಕಾರ್ಮಿಕರನ್ನು ಖಾಯಂ ಮಾಡುವುದಾಗಿ ಭರವಸೆ ನೀಡಿತ್ತು. ಈ ಬಗ್ಗೆ ಸರಕಾರಕ್ಕೆ ಸಂಘ ನಿರಂತರವಾಗಿ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಈ ಕಾರಣದಿಂದ ಮೇ 25ರಂದು ರಾಜ್ಯಾದ್ಯಂತ ಒಂದು ದಿನದ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ದ.ಕ. ಜಿಲ್ಲಾ ಪೌರ ಕಾರ್ಮಿಕರ ಹಾಗೂ ನಾಲ್ಕನೆ ದರ್ಜೆ ನೌಕರರ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಕಂಕನಾಡಿ ಹೇಳಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ದ.ಕ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಧರಣಿ ಮಾಡಿ ಮನವಿ ಸಲ್ಲಿಸಲಾಗುವುದು. ಈ ಬಗ್ಗೆ ಸರಕಾರ ಕೂಡಲೇ ಬೇಡಿಕೆಗಳಿಗೆ ಸ್ಪಂದನೆ ನೀಡದೇ ಹೋದಲ್ಲಿ ಜೂ.12ರಂದು ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟ ಅವಧಿಗೆ ಧರಣಿ ನಡೆಸಲಾಗುತ್ತದೆ ಎಂದರು. ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎಸ್.ಪಿ. ಆನಂದ, ಸದಸ್ಯ ಮೋನಪ್ಪ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News