ಅಕ್ರಮ ಮರಳು ಅಡ್ಡೆಗೆ ಎಸಿ ನೇತೃತ್ವದಲ್ಲಿ ದಾಳಿ: 12 ಲಾರಿ, ಹಿಟಾಜಿ ಮುಟ್ಟುಗೋಲು

Update: 2017-05-23 18:54 GMT

ಪುತ್ತೂರು, ಮೇ 24: ಪುತ್ತೂರು ತಾಲ್ಲೂಕಿನ ಚಾರ್ವಾಕ ಗ್ರಾಮದ ಕುಮಾರಧಾರಾ ನದಿ ಬದಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಪುತ್ತೂರು ಉಪವಿಭಾಗಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ಸಂಜೆ ದಾಳಿ ನಡೆಸಿ ಅಕ್ರಮ ಮರಳುಗಾರಿಕೆ ಸ್ಥಳದಲ್ಲಿದ್ದ 12 ಲಾರಿ ಹಾಗೂ ಹಿಟಾಚಿಯೊಂದನ್ನು ಮುಟ್ಟುಗೋಲು ಹಾಕಿಕೊಂಡಿದೆ.
 

ಚಾರ್ವಾಕದ ಕುಮಾರಧಾರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂಬ ದೂರಿನ ಹಿನ್ನಲೆಯಲ್ಲಿ ಉಪ ವಿಭಾಗಾಧಿಕಾರಿ ಡಾ.ರಘುನಂದನ್ ಮೂರ್ತಿ ಅವರು ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ ಹಾಗೂ ಕಡಬ ಪೊಲೀಸರೊಂದಿಗೆ ಸೋಮವಾರ ಸಂಜೆ ದಾಳಿ ಕಾರ್ಯಾಚರಣೆ ನಡೆಸಿದ್ದರು.

ಈ ಸಂದರ್ಭದಲ್ಲಿ ಮರಳು ತುಂಬಿಸಲು ಸ್ಥಳದಲ್ಲಿ ನಿಲ್ಲಿಸಲಾಗಿದ್ದ 12 ಲಾರಿ ಮತ್ತು ಹಿಟಾಜಿಯನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಳ್ಳಲು ಸಂಬಂಧ ಪಟ್ಟ ಇಲಾಖೆಗೆ ಸೂಚಿಸಿರುವುದಾಗಿ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News