ಮೇ 26: ಭಿನ್ನ ಸಾಮರ್ಥ್ಯದ ಮಕ್ಕಳ ವಸತಿ ಶಾಲೆ, ತರಬೇತಿ ಕೇಂದ್ರ ಲೋಕಾರ್ಪಣೆ

Update: 2017-05-23 18:59 GMT

ಮೂಡುಬಿದಿರೆ, ಮೇ 24: ರಿಜುವನೇಟ್ ಚೈಲ್ಡ್ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಪ್ರಾಯೋಜಕತ್ವದ ವತಿಯಿಂದ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿಯುತ ಶಾಲೆ ಮತ್ತು ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭವು ಮೇ 26ರಂದು ಬೆಳಗ್ಗೆ 10 ಗಂಟೆಗೆ ಮೂಡುಬಿದಿರೆಯ ಅರಮನೆ ಬಾಗಿಲು, ಸಾವಿರ ಕಂಬದ ಬಸದಿ ಹಿಂಬದಿಯಲ್ಲಿ ನಡೆಯುವುದು ಎಂದು ಸದಾಶಿವ ಶೆಟ್ಟಿಗಾರ್ ಮೂಡುಬಿದಿರೆ ಪ್ರೆಸ್ ಕ್ಲಬ್‌ನ  ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಂಘದ ಅಧ್ಯಕ್ಷೆ ಮೀರಾ ಸತೀಶ್ ಮಾಡಲಿದ್ದಾರೆ. ಶಾಸಕ ಅಭಯಚಂದ್ರ ಜೈನ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಮೂಡುಬಿದಿರೆ ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಮರ್ದಾಳ ಬೆಥಾನಿ ಜೀವನಜ್ಯೋತಿ ವಿಶೇಷ ಶಾಲೆಯ ನಿರ್ದೇಶಕ ರೆ.ಪಾ. ಆ್ಯಂಟನಿ, ಮಂಗಳೂರು ದ.ಕ.ಜಿಲ್ಲಾ ಪದ್ಮಾಶಾಲಿ ವಿದ್ಯಾವರ್ದಕ ಸಂಘದ ಅಧ್ಯಕ್ಷ ಎಂ.ಜಯರಾಮ್ ಶೆಟ್ಟಿಗಾರ್, ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ಮಹಮ್ಮದ್ ಶರೀಫ್, ದ.ಕ.ಜಿಲ್ಲೆ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮೂಡುಬಿದಿರೆ ಲಯನ್ಸ್ ಕ್ಲಬ್ ಅಧ್ಯಕ್ಷ ರುಕ್ಕಯ್ಯ ಪೂಜಾರಿ, ಮೂಡುಬಿದಿರೆ ವಕೀಲ ಸಂಘದ ಅಧ್ಯಕ್ಷ ಬಾಹುಬಲಿ ಪ್ರಸಾದ್, ಮುಲ್ಕಿ ಮೂಡುಬಿದಿರೆ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷ ಅಶ್ವಿನಿ ಜೆ. ಪಿರೇರಾ, ಮೂಡುಬಿದಿರೆ ಉದ್ಯಮಿ ಸಿ.ಎಚ್.ಅಬ್ದುಲ್ ಗಫೂರ್ ಭಾಗವಹಿಸಿಲಿರುವರು.

 ಪತ್ರಿಕಾಗೋಷ್ಟಿಯಲ್ಲಿ ಮೆನೇಜಿಂಗ್ ಟ್ರಸ್ಟಿ ಪ್ರಕಾಶ್ ಜೆ.ಶೆಟ್ಟಿಗಾರ್, ದೇವದಾಸ್ ಶೆಟ್ಟಿಗಾರ್ ಕಾರ್ಕಳ, ಗೋಪಾಲ್ ಶೆಟ್ಟಿಗಾರ್ ಕಿನ್ನಿಗೋಳಿ, ಸಿ.ಎಚ್.ಅಬ್ದುಲ್ ಗಫೂರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News