ಪತಿಯ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ

Update: 2017-05-24 08:54 GMT

ಬದಾಯುನ್(ಉ.ಪ್ರ),ಮೇ 24: ವ್ಯಕ್ತಿಯನ್ನು ಮರವೊಂದಕ್ಕೆ ಕಟ್ಟಿ ಹಾಕಿದ ಮೂವರು ದುರುಳರು ಆತ ಕೂಗದಂತೆ ಬಾಯಿಗೆ ಬಟ್ಟೆ ತುರುಕಿ ಆತನ ಕಣ್ಣೆದುರೇ 27ರ ಹರೆಯದ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರವನ್ನು ನಡೆಸಿದ ಹೇಯ ಘಟನೆ ಬದಾಯುನ್ ಜಿಲ್ಲೆಯ ಸಹಸ್ವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಸೋಮವಾರ ಸಂಜೆ ದಂಪತಿ ಆಸ್ಪತ್ರೆಯಿಂದ ಮನೆಗೆ ಮರಳುತ್ತಿದ್ದಾಗ ದಾರಿ ಮಧ್ಯೆ ಅವರ ಬೈಕ್‌ನ್ನು ತಡೆದು ನಿಲ್ಲಿಸಿದ ದುಷ್ಕರ್ಮಿಗಳು ಈ ಕೃತ್ಯವನ್ನು ನಡೆಸಿದ್ದಾರೆ. ಸಂತ್ರಸ್ತರ ದೂರಿನ ಮೇರೆಗೆ ಸಮೀಪದ ಗ್ರಾಮಗಳ ನಿವಾಸಿಗಳಾಗಿರುವ ಆರೋಪಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಅವರ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News