10ಕ್ಕಿಂತ ಕಡಿಮೆ ದಾಖಲಾತಿ: 14 ಪದವಿ ಪೂರ್ವ ಕಾಲೇಜು ಬಂದ್

Update: 2017-05-24 14:29 GMT

ಬೆಂಗಳೂರು, ಮೇ 24: ಶೂನ್ಯ ದಾಖಲಾತಿ ಹೊಂದಿರುವ ನಾಲ್ಕು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು 2016-17ನೆ ಸಾಲಿನಲ್ಲಿ ಪ್ರಥಮ ಪಿಯುಸಿ ತರಗತಿಗೆ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾತಿ ಹೊಂದಿರುವ 14ಸರಕಾರಿ ಪದವಿ ಪೂರ್ವ ಕಾಲೇಜುಗಳನ್ನು ಮುಚ್ಚಿ ಅಗತ್ಯವಿರುವ ಸ್ಥಳಗಳಲ್ಲಿ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮುಚ್ಚಲ್ಪಟ್ಟಿರುವ ಕಾಲೇಜುಗಳು: ಹೊಳೆನರಸೀಪುರ ತಾಲೂಕಿನ ಚಕ್ಕೇನಹಳ್ಳಿಯಲ್ಲಿದ್ದ ಸರಕಾರಿ ಪದವಿ ಪೂರ್ವ ಕಾಲೇಜು. ಹಿರೇಹಡಗಲಿಯಲ್ಲಿದ್ದ ಸರಕಾರಿ ಪದವಿ ಪೂರ್ವ ಕಾಲೇಜು. ಹಿರೇಹಡಗಲಿ ತಾಲೂಕಿನ ಸೋಗಿಯಲ್ಲಿದ್ದ ಸರಕಾರಿ ಪದವಿ ಪೂರ್ವ ಕಾಲೇಜು. ಹಡಗಲಿ ತಾಲೂಕಿನ ಉತ್ತಂಗಿಯಲ್ಲಿದ್ದ ಸರಕಾರಿ ಪದವಿ ಪೂರ್ವ ಕಾಲೇಜು. ಹಾಸನದ ದುದ್ದದಲ್ಲಿದ್ದ ಸರಕಾರಿ ಪದವಿ ಪೂರ್ವ ಕಾಲೇಜು. ಚನ್ನರಾಯಪಟ್ಟಣ ತಾಲೂಕಿನ ಶ್ರೀನಿವಾಸಪುರದಲ್ಲಿದ್ದ ಸರಕಾರಿ ಪದವಿ ಪೂರ್ವ ಕಾಲೇಜು.

ಸಕಲೇಶಪುರ ತಾಲೂಕಿನ ವನಗೂರಿನಲ್ಲಿದ್ದ ಸರಕಾರಿ ಪದವಿ ಪೂರ್ವ ಕಾಲೇಜು. ಹಾಸನ ತಾಲೂಕಿನ ಕಟ್ಟಾಯ ಹೋಬಳಿಯಲ್ಲಿದ್ದ ಸರಕಾರಿ ಪದವಿ ಪೂರ್ವ ಕಾಲೇಜು. ಬೆಂಗಳೂರು ನ್ಯೂ ಫೋರ್ಟ್ ಪದವಿ ಪೂರ್ವ ಕಾಲೇಜು. ಮಳವಳ್ಳಿ ತಾಲೂಕಿನ ಹಾಡ್ಲಿ ಸರ್ಕಲ್‌ನಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜು. ಶ್ರೀರಂಗಪಟ್ಟಣ ತಾಲೂಕಿನ ಎಂ.ಶೆಟ್ಟಿಹಳ್ಳಿಯಲ್ಲಿರುವ ಪದವಿ ಪೂರ್ವ ಕಾಲೇಜು. ರಾಮನಗರ ಜಿಲ್ಲೆ ಲಕ್ಷ್ಮಿಪುರದಲ್ಲಿರುವ ಪದವಿ ಪೂರ್ವ ಕಾಲೇಜು. ಶಿಕಾರಿಪುರ ತಾಲೂಕಿನ ಹರಗುವಳ್ಳಿಯಲ್ಲಿರುವ ಪದವಿ ಪೂರ್ವ ಕಾಲೇಜು. ಕೆ.ಆರ್.ಪೇಟೆ ತಾಲೂಕಿನ ಅಘಲಾಯದಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜು.

 ಹೊಸ ಪದವಿ ಪೂರ್ವ ಕಾಲೇಜುಗಳ ವಿವರ: ಟಿ.ನರಸೀಪುರ ತಾಲೂಕಿನ ಹದಿನಾರು ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು. ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು. ತುಮಕೂರಿನ ಮಧುಗಿರಿ ಪಟ್ಟಣದಲ್ಲಿ ಪದವಿ ಪೂರ್ವ ಕಾಲೇಜು. ಶಿಡ್ಲಘಟ್ಟದಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು. ಮೈಸೂರಿನ ನಿಜಾಮಿಯಾ ಬಾರಿಗಾರ್ಡ್ ಶಾಲಾ ಆವರಣದಲ್ಲಿ ಮಹಿಳಾ ಪದವಿ ಕಾಲೇಜು. ಮೈಸೂರು ನಗರದಲ್ಲಿರುವ ಕಲ್ಯಾಣಗಿರಿಯಲ್ಲಿ ಪದವಿ ಪೂರ್ವ ಕಾಲೇಜು. ಮೈಸೂರು ನಗರದ ರಾಜೀವನಗರದಲ್ಲಿ ಪದವಿ ಪೂರ್ವ ಕಾಲೇಜು. ದಾವಣಗೆರೆ ಹೊನ್ನಾಳಿ ತಾಲೂಕಿನಲ್ಲಿ ಪದವಿ ಪೂರ್ವ ಕಾಲೇಜು.

ಬೆಂಗಳೂರಿನ ಶಿವಾಜಿನಗರದಲ್ಲಿ ವಿ.ಕೆ.ಒಬೇದುಲ್ಲಾ ಸರಕಾರಿ ಪದವಿ ಪೂರ್ವ ಕಾಲೇಜು. ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಹಂದನಕೆರೆಯಲ್ಲಿ ಪದವಿ ಪೂರ್ವ ಕಾಲೇಜು. ಗದಗ ಜಿಲ್ಲೆ ಮುಳುಗುಂದ ಪಟ್ಟಣದಲ್ಲಿ ಪದವಿ ಪೂರ್ವ ಕಾಲೇಜು. ಮೈಸೂರಿನ ಯರಗನಹಳ್ಳಿ ವಾರ್ಡ್‌ನಲ್ಲಿ ಪದವಿ ಪೂರ್ವ ಕಾಲೇಜು. ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು. ಕೆ.ಆರ್.ಪೇಟೆಯ ತೆಂಡೇಕೆರೆ ಗ್ರಾಮದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News