×
Ad

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Update: 2017-05-24 20:44 IST

ಉಡುಪಿ, ಮೇ 24: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ನೋಟೀಸು ಬೋರ್ಡ್ ನಲ್ಲಿ ಪ್ರಕಟಿಸಲಾಗಿದೆ. ಇದರ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಮೇ 30ರ ಸಂಜೆ 5 ಗಂಟೆಯೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ ಇವರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ.

ಕುಂದಾಪುರ: ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಕೈಲ್ಕೆರೆ, ಉಳ್ತೂರು, ಅಂ. ಕೇಂದ್ರದ ಕಾರ್ಯಕರ್ತೆ ಹಾಗೂ ಬಡಾಬೆಟ್ಟು, ಬಡಾಕೆರೆ-2, ಯಡ್ನಾಳಿ ಅಂಗನವಾಡಿ ಕೇಂದ್ರದ ಸಹಾಯಕಿಯರನ್ನು ಗುರುತಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಮೇ 30 ರೊಳಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಲೋಕೋಪಯೋಗಿ ಕಚೇರಿ ಹಿಂದುಗಡೆ, ಎನ್.ಹೆಚ್. 66 ಕುಂದಾಪುರ ಇಲ್ಲಿಗೆ ಲಿಖಿತವಾಗಿ ನೀಡಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News