×
Ad

ಎಂಡೋ ಸಂತ್ರಸ್ತರ ಅಮರಣಾಂತ ಉಪವಾಸಕ್ಕೆ ಎಸ್‌ಡಿಪಿಐ ಬೆಂಬಲ

Update: 2017-05-24 20:57 IST

ಮಂಗಳೂರು, ಮೇ 24: ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಸಲುವಾಗಿ ಮೇ 27ರಂದು ಬೆಳಗ್ಗೆ 10:30ಕ್ಕೆ ಕೊಕ್ಕಡ ರಿಕ್ಷಾ ನಿಲ್ದಾಣದ ಬಳಿ ಎಂಡೋ ವಿರೋಧಿ ಹೋರಾಟ ಸಮಿತಿ ಕೊಕ್ಕಡ ನಡೆಸಲಿರುವ ಬೃಹತ್ ಪ್ರತಿಭಟನಾ ಸಭೆ ಮತ್ತು ಅಮರಣಾಂತ ಉಪವಾಸ ಹೋರಾಟಕ್ಕೆ ಸಮಿತಿಯು ಎಸ್‌ಡಿಪಿಐ ಪಕ್ಷದೊಂದಿಗೆ ಬೆಂಬಲವನ್ನು ಕೋರಿದ್ದು, ಈ ನ್ಯಾಯಯುತ ಮತ್ತು ಸಂತ್ರಸ್ತರ ಹೋರಾಟದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷವು ಸಂಪೂರ್ಣ ಬೆಂಬಲ ಸೂಚಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋ ಸಲ್ಫಾನ್ ಪೀಡಿತ ಸಂತ್ರಸ್ತರ ಸಂಖ್ಯೆ ಹೆಚ್ಚಾಗುತ್ತಿದ್ದು ಸರಕಾರ ಸಂತ್ರಸ್ತರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ಮತ್ತು ಜೀವಿಸಲು ಒದಗಿಸಬೇಕಾದ ಪುನರ್ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ವಿಫಲವಾಗಿದೆ. ಮೇ 27ರ ಹೋರಾಟ ದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News