ಜಲೀಲ್ ಕರೋಪಾಡಿ ಕೊಲೆ ಪ್ರಕರಣ: ಮೇ 26ರಂದು ವಿಟ್ಲದಲ್ಲಿ ಪ್ರತಿಭಟನೆ
Update: 2017-05-25 19:52 IST
ಬಂಟ್ವಾಳ, ಮೇ 25: ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎ.ಅಬ್ದುಲ್ ಜಲೀಲ್ ಕೊಲೆ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಮೇ 26ರಂದು ವಿಟ್ಲದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ವಿಟ್ಲ ಮೇಗಿನಪೇಟೆ ಮಸೀದಿ ಎದುರಿನಿಂದ ರ್ಯಾಲಿ ನಡೆಯಲಿದ್ದು ಬಳಿಕ ವಿಟ್ಲ ಪೊಲೀಸ್ ಠಾಣೆ ಸಮೀಪದ ಉಪ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನಾ ಸಭೆ ನಡೆಯಲಿದೆ. ಪಿಎಫ್‌ಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ, ಎಸ್‌ಡಿಪಿಐ ದ.ಕ. ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೋಡಾಜೆ ಭಾಷಣ ಮಾಡಲಿದ್ದಾರೆ. ಪಿಎಫ್‌ಐ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾರ್ ಅಹ್ಮದ್ ಅಕ್ಕರಂಗಡಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.