×
Ad

ಟ್ರ್ಯಾಕ್ಟರ್ ಪಲ್ಟಿಯಾಗಿ ಮಹಿಳೆಯರು, ಮಕ್ಕಳು ಸೇರಿ 11 ಮಂದಿ ಮೃತ್ಯು

Update: 2017-05-25 21:30 IST

ಇಂದೋರ್, ಮೇ 25: ಟ್ರ್ಯಾಕ್ಟರೊಂದು ಪಲ್ಟಿಯಾಗಿ ಮಹಿಳೆಯರು, ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟ ಘಟನೆ ಇಲ್ಲಿನ ನೀಮುಚ್ ಜಿಲ್ಲೆಯಲ್ಲಿ ನಡೆದಿದೆ.

ರಾಜಸ್ಥಾನದ ಸನ್ವಾರಿಯಾ ಸೇತ್ ದೇವಸ್ಥಾನದಲ್ಲಿ ಪೂಜೆ ಮುಗಿಸಿ ತಮ್ಮ ಸ್ವಗ್ರಾಮವಾದ ಖಂಡಾರಿಯಾ ಕಚಾರಿಯಾಗೆ ಮರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ನ ಒಂದು ಚಕ್ರ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ್ದು, ಟ್ರ್ಯಾಕ್ಟರ್ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಯೋರ್ವರು ಮಾಹಿತಿ ನೀಡಿದ್ದಾರೆ.

ಟ್ರ್ಯಾಕ್ಟರ್ ನಲ್ಲಿ ಸುಮಾರು 35 ಮಂದಿಯಿದ್ದು, ಇದರಲ್ಲಿ 11 ಮಂದಿಯ ತಲೆಗೆ ಗಂಭೀರ ಗಾಯಗಳಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಲ್ಲಿ ಆರು ಮಹಿಳೆಯರು ಹಾಗೂ 4 ಮಕ್ಕಳು ಸೇರಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಟ್ರ್ಯಾಕ್ಟರ್ ನಡಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. 22 ಮಂದಿಯನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News