ಕೊಣಾಜೆ: ಉಚಿತ ತರಕಾರಿ ಬೀಜ ವಿತರಣೆ
ಕೊಣಾಜೆ,ಮೇ 25: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ(ರಿ), ವಿಜಯ ಗ್ರಾಮಾಭಿವೃದ್ದಿ ಸಮಿತಿ, ವಿಜಯ ಬ್ಯಾಂಕ್ ಕೊಣಾಜೆ ಹಾಗೂ ಕೊಣಾಜೆ ಗ್ರಾಮ ಪಂಚಾಯಿತಿ ಇದರ ಆಶ್ರಯದಲ್ಲಿ ರೈತರಿಗೆ ಹಾಗೂ ಪಂಚಾಯಿತಿ ಸದಸ್ಯರಿಗೆ ತರಕಾರಿ ಬೀಜ ವಿತರಣೆ ಕಾರ್ಯಕ್ರಮವು ಕೊಣಾಜೆ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆಯಿತು.
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಆಡಳಿತ ಸಮಿತಿ ನಿರ್ದೇಶಕರಾದ ಪ್ರಸಾದ್ ರೈ ಕಲ್ಲಿಮಾರ್ ಅವರು ರೈತರಿಗೆ ಉಚಿತ ತರಕಾರಿ ಬೀಜವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದು ಕೃಷಿ ಚಟುವಟಿಕೆಗೆ ಹಲವಾರು ಸೌಲಭ್ಯಗಳು ದೊರೆಯುತ್ತಿದ್ದು ಈ ಬಗ್ಗೆ ಸಾರ್ವಜನಿಕರು ಹೆಚ್ಚಿನ ಮಾಹಿತಿಯನ್ನು ಅರಿತುಕೊಂಡು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೌಕತ್ ಆಲಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನದ ಕಾರ್ಯ ನಿರ್ವಹಣಾಧಿಕಾರಿ ಉದಯ ಹೆಗ್ಡೆ, ವಿಜಯ ಬ್ಯಾಂಕ್ ಮ್ಯಾನೇಜರ್ ಆತ್ಮರಾಮ್ ಶೆಟ್ಟಿ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕೇಶವ, ಪಂಚಾಯಿತಿ ಸದಸ್ಯರಾದ ನಝರ್ ಷಾ, ಮೊಹಮ್ಮದ್ ಇಕ್ಬಾಲ್, ಮುತ್ತು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮಾಭಿವೃದ್ಧಿ ಸಮಿತಿಯ ಪ್ರದಾನ ಕಾರ್ಯದರ್ಶಿ ಕೆ.ಅಚ್ಯುತಗಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು.