ವಿಶ್ವಕಪ್ ಕ್ವಾಲಿಫೈಯರ್: ಇಂಗ್ಲೆಂಡ್ ತಂಡದಿಂದ ರೂನಿ ಔಟ್

Update: 2017-05-25 17:49 GMT

ಲಂಡನ್, ಮೇ 25: ಮ್ಯಾಂಚೆಸ್ಟರ್ ಯುನೈಟೆಡ್ ತಂಡದ ಸ್ಟ್ರೈಕರ್ ವೇಯ್ನಾ ರೂನಿ ಮುಂದಿನ ತಿಂಗಳು ನಡೆಯಲಿರುವ ಸ್ಕಾಟ್ಲೆಂಡ್ ವಿರುದ್ಧದ ವಿಶ್ವಕಪ್ ಅರ್ಹತಾ ಪಂದ್ಯ ಹಾಗೂ ಫ್ರಾನ್ಸ್ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದಿಲ್ಲ ಎಂದು ಫುಟ್ಬಾಲ್ ಸಂಸ್ಥೆ ಗುರುವಾರ ತಿಳಿಸಿದೆ.

31ರ ಹರೆಯದ ರೂನಿ ಕಳೆದ ಕೆಲವು ಸಮಯದಿಂದ ಮಂಡಿನೋವಿನಿಂದ ಬಳಲುತ್ತಿದ್ದು, ಇದೀಗ ಸಂಪೂರ್ಣ ಫಿಟ್ ಆಗಿದ್ದಾರೆ. ಮ್ಯಾಂಚೆಸ್ಟರ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದ ರೂನಿ ಇಂಗ್ಲೆಂಡ್ ಫುಟ್ಬಾಲ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News