ವಿಷ ಸೇವಿಸಿ ಆತ್ಮಹತ್ಯೆ
Update: 2017-05-26 17:14 IST
ಚಿಕ್ಕಮಗಳೂರು, ಮೇ 26: ಅಡಿಕೆ ತೋಟಗಳು ಒಣಗಿ ಹೋದ ಹಿನ್ನೆಲೆಯಲ್ಲಿ ಬೇಸತ್ತು ಕೃಷಿಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕೃಷಿಕನನ್ನು ಚಂದ್ರಪ್ಪ (52) ಎಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತರ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.