×
Ad

ಎಲ್ಲರಿಗೂ ಉದ್ಯೋಗ ಒದಗಿಸಲು ಸಾಧ್ಯವಿಲ್ಲ ಎಂದ ಅಮಿತ್ ಶಾ !

Update: 2017-05-26 18:29 IST

ಹೊಸದಿಲ್ಲಿ, ಮೇ 26: 125 ಕೋಟಿ ಜನರಿರುವ ದೇಶದ ಸಂಘಟಿತ ವಲಯದಲ್ಲಿ ಎಲ್ಲರಿಗೂ ಉದ್ಯೋಗ ದೊರಕಿಸಿಕೊಡಲು ಸಾಧ್ಯವಿಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಎನ್ ಡಿಎ ಸರಕಾರದ ಅವಧಿಯಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ ಎನ್ನುವ ಆರೋಪಕ್ಕೆ ಉತ್ತರಿಸಿದ ಅವರು, ನಿರುದ್ಯೋಗ ಸಮಸ್ಯೆ ಮಾಧ್ಯಮಗಳ ವರದಿಯ ಹೊರತು ಬೇರೆಲ್ಲೂ ಇಲ್ಲ ಎಂದರು. 

“ಬೃಹತ್ ಜನಸಂಖ್ಯೆಯ ರಾಷ್ಟ್ರದಲ್ಲಿ ಎಲ್ಲರಿಗೂ ಉದ್ಯೋಗ ಒದಗಿಸಿಕೊಡಲು ಸಾಧ್ಯವಿಲ್ಲ. ಆದ್ದರಿಂದ ನಾವು ಸ್ವರೋಜ್ ಗಾರ್ (ಸ್ವ-ಉದ್ಯೋಗ) ನ್ನು ಪ್ರೋತ್ಸಾಹಿಸುತ್ತಿದ್ದೇವೆ” ಎಂದು ಅಮಿತ್ ಶಾ ಹೇಳಿದ್ದಾರೆ,

2013-14ರಲ್ಲಿದ್ದ ಶೇ.4.9ರಷ್ಟು ನಿರುದ್ಯೋಗದ ಸಮಸ್ಯೆ, 2015-16ನೆ ಸಾಲಿನಲ್ಲಿ 5 ಶೇ.ದಷ್ಟು ಹೆಚ್ಚಳವಾಗಿದೆ ಎಂಬ ಅಧಿಕೃತ ಅಂಕಿಅಂಶಗಳ ಹಿನ್ನೆಲೆಯಲ್ಲಿ ವಿಪಕ್ಷಗಳು ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದಿದ್ದವು. 2016ರ ಅಕ್ಟೋಬರ್ ನಿಂದ ಡಿಸೆಂಬರ್ ಅವಧಿಯಲ್ಲಿ 1.52 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿರುವುದಾಗಿ ಕಾರ್ಮಿಕ ಬ್ಯೂರೋ ವರದಿ ನೀಡಿತ್ತು. ನವೆಂಬರ್ 8ರಂದು ಪ್ರಧಾನಿ ಮೋದಿ 500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿ ಆದೇಶ ಹೊರಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News