ಮೇ 28: ಭಾರತೀಯ ಸಂಸ್ಕೃತಿ ಉತ್ಸವ
Update: 2017-05-26 21:36 IST
ಉಡುಪಿ, ಮೇ 26: ಲಯನ್ಸ್ ಕ್ಲಬ್ ಉಡುಪಿ ಚೇತನ ಇದರ ಐದನೆ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರು ಕನ್ನಡ ಜಾಗೃತ ಬಳಗದ ಸಹಕಾರದೊಂದಿಗೆ ‘ಭಾರತೀಯ ಸಂಸ್ಕೃತಿ ಉತ್ಸವ’ವನ್ನು ಮೇ 28ರಂದು ಮಣಿಪಾಲದ ಆರ್‌ಎಸ್‌ಬಿ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಬೆಳಗ್ಗೆ 10:30ಕ್ಕೆ ಲಯನ್ಸ್ ಜಿಲ್ಲಾ ದ್ವಿತೀಯ ಉಪಗರ್ವನರ್ ವಿ.ಜೆ.ಶೆಟ್ಟಿ ಉತ್ಸವವನ್ನು ಉದ್ಘಾಟಿಸಲಿರುವರು. ಬಳಿಕ ವಿಚಾರಗೋಷ್ಠಿಗಳು, ಭಾರತೀಯ ಸಂಸ್ಕೃತಿ ಮತ್ತು ಮಹಿಳೆ ಎಂಬ ವಿಷಯದ ಕುರಿತು ಚರ್ಚೆ, ಗೀತಾ ಭಾರತಿ ಕಾರ್ಯಕ್ರಮ ಜರಗಲಿದೆ. ಸಂಜೆ 4ಗಂಟೆಗೆ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಬಳಿಕ ಕೆರೆಮನೆ ಶ್ರೀಮಹಾ ಗಣಪತಿ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಪ್ರದರ್ಶನ ಜರಗಲಿದೆ ಎಂದು ಸಂಸ್ಥೆ ಅಧ್ಯಕ್ಷ ಶಂಕರ್ ನಾಯಕ್ ಸುದ್ದಿಗೋಷ್ಟಿಯಲ್ಲಿಂದು ತಿಳಿಸಿದರು.ಸ್ವಾಗತ ಸಮಿತಿ ಅಧ್ಯಕ್ಷ ರತ್ನಾಕರ್ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಜಗದೀಶ್ ಆಚಾರ್ಯ ಉಪಸ್ಥಿತರಿದ್ದರು.