×
Ad

​ಅರ್ಜಿ ಆಹ್ವಾನ

Update: 2017-05-26 21:42 IST

ಉಡುಪಿ, ಮೇ 26: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2017-18ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ 18ರಿಂದ 50 ವರ್ಷದೊಳಗಿನ ಪರ್ವತಾರೋಹಿಗಳಿಗೆ ಸಹಾಯಧನ ನೀಡಲಾಗುತ್ತಿದೆ.
 

ಇದರ ಪ್ರಯೋಜನ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಪರ್ವತಾರೋಹಿಗಳು ತಮ್ಮ ಪ್ರಸ್ತಾವನೆಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ತಮ್ಮ ಸಾಧನೆಗಳ ದೃಢೀಕೃತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇಲ್ಲಿಗೆ ಜೂ.10ರೊಳಗೆ ಕಳುಹಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಡಾ.ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ (ಮೊಬೈಲ್:9480886467) ಇವರನ್ನು ಸಂಪರ್ಕಿ ಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News