6 ಲಕ್ಷ ರೂ. ಮೌಲ್ಯದ ನಗನಗದು ಕಳವು
Update: 2017-05-26 22:17 IST
ಪಡುಬಿದ್ರೆ, ಮೇ 26: ಪಡುಬಿದ್ರೆ ಬ್ರಹ್ಮಸ್ಥಾನದ ಬಳಿಯ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ವೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಶುಭ ಆರ್. ಶಾಸ್ತ್ರಿ ಎಂಬವರ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಒಳನುಗ್ಗಿದ ಕಳ್ಳರು, ಒಟ್ಟು 6,06,000 ರೂ. ಮೌಲ್ಯದ 303 ಗ್ರಾಂ ಚಿನ್ನಾಭರಣಗಳನ್ನು ಮತ್ತು 20,000 ರೂ. ನಗದನ್ನು ಕಳವು ಮಾಡಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.